ಉಡುಪಿ ಜಿಲ್ಲಾಮಟ್ಟದ ಚಾಣಕ್ಯ ಶಿಕ್ಷಕ ಪ್ರಶಸ್ತಿ ಪ್ರದಾನ

Update: 2024-09-10 12:22 GMT

ಹೆಬ್ರಿ: ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡಮಾಡುವ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಪ್ರದಾನ ಮಾಡಲಾಯಿತು.

ಮುದ್ರಾಡಿ ಗ್ರಾಪಂ ಸದಸ್ಯ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಅವರ ಪುತ್ರ ಸನತ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಚಾರ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಸುನೀಲ್ ಕುಮಾರ್, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೇ ವೀಣಾ ಯು.ಶೆಟ್ಟಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ ಹಾಗು ಜೇಸಿಐ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಚಾರ ಜವಾಹರ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲ ವಿ.ಕೆ.ಮನೋಹರ್, ನೇತಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಪೂಜಾರಿ ಬಲ್ಲಾಡಿ, ಜೇಸಿಐ ಅಧ್ಯಕ್ಷೆ ರಕ್ಷಿತಾ ಪುಟ್ಟಣ್ಣ ಭಟ್, ಪೂರ್ವಾಧ್ಯಕ್ಷ ಪ್ರಶಾಂತ್ ಪೈ, ಜೇಸಿರೆಟ್ ಪೂರ್ವಾದ್ಯಕ್ಷೆ ಅನಿತಾ ಪಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News