ಉಡುಪಿ ಹತ್ಯಾಕಾಂಡ; ವಿಶೇಷ ನ್ಯಾಯಾಲಯದ ಮೂಲಕ ಅಪರಾಧಿಗೆ ಕಠಿಣ ಶಿಕ್ಷೆ ನೀಡಿಬೇಕು: ಶಾಹುಲ್ ಹಮೀದ್ ಕೆ.ಕೆ
ಮಂಗಳೂರು : ಕರಾವಳಿ ಕರ್ನಾಟಕ ಮತ್ತು ಉಡುಪಿ ಜಿಲ್ಲೆಯ ಜನರನ್ನು ಭಯಭೀತಗೊಳಿಸಿದ ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಕೊಲೆಗೈದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿದ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ನೇತೃತ್ವದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರು ಮತ್ತು ಜಮೀಯ್ಯತುಲ್ ಫಲಾಹ್ ದ.ಕ., ಉಡುಪಿ ಜಿಲ್ಲಾಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ಅವರು ತಿಳಿಸಿದ್ದಾರೆ.
ಪೊಲೀಸರ ಈ ಕಾರ್ಯ ಸಫಲತೆಗೆ ವಿಶೇಷ ಅಭಿನಂದನೆಗಳು. ಉಡುಪಿ ಪೊಲೀಸರ ಕಾರ್ಯವೈಖರಿಯು ಪೊಲೀಸರ ಮೇಲೆ ಜನರಿಗೆ ಇರುವ ನಂಬಿಕೆಯನ್ನು ಇಮ್ಮಡಿಗೊಳಿಸಿದೆ. ಸದರಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಈ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತ್ವರಿತವಾಗಿ ಮುಗಿಸಿ ಅಪರಾಧಿಗೆ ಕಠಿಣ ಶಿಕ್ಷೆ ನೀಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಶಾಹುಲ್ ಹಮೀದ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.