ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಉಳ್ಳಾಲ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಲಭಿಸಬೇಕೆಂದು ಗುರಿ ಇಟ್ಟು ಕೊಂಡಿದ್ದರು. ಫುಡ್ ಕೌನ್ಸಿಲ್ ಆಕ್ಟ್, ಪ್ರತಿಯೊಬ್ಬರಿಗೂ ಕೆಲಸ ನೀಡಲು ನರೇಗಾ ಯೋಜನೆ ತಂದಿದ್ದಾರೆ, ಮೂರು ವರ್ಷ ಅವರೊಂದಿಗೆ ನಾನು ಕೆಲಸ ಮಾಡಿದ್ದೇನೆ. ಈ ದೇಶದ ಉತ್ತಮ ಆಡಳಿತಗಾರರಾಗಿದ್ದಾರೆ, ಅವರ ಅಗಲುವಿಕೆಯಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದ ಬಳಿಕ ಅವರು ಮಾತನಾಡಿದರು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಅವರು ಮಾಜಿ ಪ್ರಧಾನಿಯವರ ಸೇವೆ ಬಗ್ಗೆ ವಿವರಿಸಿದರು. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ, ಮಂಗಳೂರು ತಾ.ಪಂ.ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಕರ್ನಾಟಕ ಸರಕಾರ ವಕ್ಫ್ ಸಲಹಾ ಸಮಿತಿ ಸದಸ್ಯ ಅಬ್ದುಲ್ ರಹ್ಮಾನ್ ಕೋಡಿಜಾಲ್, ವಕ್ಫ್ ಬೋರ್ಡ್ ರಾಜ್ಯ ಸದಸ್ಯ ರಝಿಯಾ ಇಬ್ರಾಹಿಮ್, ಉಳ್ಳಾಲ ನಗರ ಸಭೆ ಅಧ್ಯಕ್ಷ ಶಶಿಕಲಾ, ಉಪಾಧ್ಯಕ್ಷ ಸಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಪ್ರಮುಖರಾದ ಉಸ್ಮಾನ್ ಕಲ್ಲಾಪು, ದಿನೇಶ್ ರೈ, ದೇವಣ್ಣ ಶೆಟ್ಟಿ, ಝಕರಿಯ್ಯಾ ಮಲಾರ್, ವಿಲ್ಫ್ರೆಡ್ ಡಿಸೋಜ, ಕೋಟೆಕಾರ್ ವಲಯ ಕಾಂಗ್ರೆಸ್ ಅಧ್ಯಕ್ಷ ಸುಕುಮಾರ್ ಗಟ್ಟಿ, ನಾಗೇಶ್ ತೊಕ್ಕೋಟ್ಟು, ಇಸ್ಮಾಯಿಲ್ ನಾಟೆಕಲ್, ಎ.ಕೆ ರಹ್ಮಾನ್ ಕೋಡಿಜಾಲ್, ಮನ್ಸೂರ್ ಮಂಚಿಲ, ಸಲಾಂ ಕೆ.ಸಿ ರೋಡ್, ಚಂಚಲಾಕ್ಷಿ ಅಸೈಗೋಳಿ, ವೀಣಾ ಶಾಂತಿ ಡಿಸೋಜ, ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಕಾರ್ಯಕ್ರಮ ಸ್ವಾಗತಿಸಿನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಎ.ಕೆ ರಹ್ಮಾನ್ ಕೋಡಿಜಾಲ್ ವಂದಿಸಿದರು.