ಉಳ್ಳಾಲ: ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ
Update: 2024-07-04 15:30 IST

ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮದನಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ನಡೆಯಿತು.
ಟ್ರಸ್ಟ್ ಅಧ್ಯಕ್ಷ ಮದನಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಹಾಜಿ ಮುಹಮ್ಮದ್ ತ್ವಾಹ ಮಾತನಾಡಿ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ಜವಾಬ್ದಾರಿ ನಮ್ಮದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮದನಿ ವಿದ್ಯಾ ಸಂಸ್ಥೆಯ ಕೋಶಾಧಿಕಾರಿ ಹಾಜಿ ಯು.ಪಿ ಅರಬಿ, ಲೆಕ್ಕ ಪರಿಶೋಧಕರಾದ ಇಬ್ರಾಹಿಂ ಆಲಿಯಬ್ಬ, ಸದಸ್ಯ ಯು.ಎ ಇಸ್ಮಾಯಿಲ್ ,ಸಂಚಾಲಕ ಕೆ.ಎನ್ ಮುಹಮ್ಮದ್ ಉಪಸ್ಥಿತರಿದ್ದರು.