ಉಳ್ಳಾಲ: ಅಕ್ರಮ ಮರಳು ಸಾಗಾಟ; ಟಿಪ್ಪರ್ ಪೊಲೀಸ್‌ ವಶ

Update: 2024-02-21 07:10 GMT

ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಅನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.

ಉಚ್ಚಿಲ ಬಟ್ಟಪ್ಪಾಡಿ ಯಿಂದ ಮರಳು ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News