ನ.24 ರಂದು ಉಳ್ಳಾಲ ಉರೂಸ್ ದಿನ ನಿಗದಿ, ಧ್ವಜಾರೋಹಣ ಕಾರ್ಯಕ್ರಮ
ಉಳ್ಳಾಲ : ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮ ಪಡೆಯುತ್ತಿರುವ ಖುತುಬುಝ್ಝಮಾನ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ಅವರ ಹೆಸರಿನಲ್ಲಿ 2025 ಎಪ್ರಿಲ್ ತಿಂಗಳಲ್ಲಿ ನಡೆಯುವ 22 ನೇ ಪಂಚವಾರ್ಷಿಕ ಹಾಗೂ 423 ನೇ ವಾರ್ಷಿಕ ಉಳ್ಳಾಲ ಉರೂಸ್ ಕಾರ್ಯಕ್ರಮದ ದಿನ ನಿಗದಿ ಹಾಗೂ ಧ್ವಜಾರೋಹಣ ಕಾರ್ಯಕ್ರಮವು ನ.24 ಭಾನುವಾರ ಬೆಳಿಗ್ಗೆ 10.30ಕ್ಕೆ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದರು.
ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಆಟಕೋಯ ತಂಙಳ್ ಕುಂಬೋಳ್, ಸಯ್ಯಿದ್ ಅತ್ತಾವುಲ್ಲ ತಂಙಳ್, ವಿಧಾನ ಸಭಾಧ್ಯಕ್ಷ ಯುಟಿ ಖಾದರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಯೆನೆಪೋಯ ಅಬ್ದುಲ್ಲಾ ಕುಂಞಿ ಹಾಜಿ, ಹಾಜಿ ಕಣಚೂರು ಮೋನು, ರಾಜಕೀಯ ಮುಖಂಡರಾದ ಬಿ.ಎಂ.ಫಾರೂಕ್, ಇನಾಯತ್ ಅಲಿ, ಯುಟಿ ಇಫ್ತಿಕಾರ್, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಎಸ್ ಎಂ ರಶೀದ್ ಹಾಜಿ, ಹಂಝ ಹಾಜಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿ ಯಲ್ಲಿ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ಧೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಜೊತೆ ಕಾರ್ಯದರ್ಶಿ ಮುಸ್ತಫಾ ಮದನಿನಗರ ಉಪಸ್ಥಿತರಿದ್ದರು.