2025 ಎಪ್ರಿಲ್‌ 24 ರಿಂದ ಮೇ 18 ರ ವರೆಗೆ ಉಳ್ಳಾಲ ಉರೂಸ್: ಖಾಝಿ ಎ ಪಿ ಉಸ್ತಾದ್‌ ಘೋಷಣೆ

Update: 2024-11-24 09:04 GMT

ಉಳ್ಳಾಲ : ಖುತುಬುಝ್ಝಮಾನ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ಅವರ ಹೆಸರಿನಲ್ಲಿ ನಡೆಯುವ 22 ನೇ ಪಂಚವಾರ್ಷಿಕ ಹಾಗೂ 432 ನೇ ವಾರ್ಷಿಕ ಉಳ್ಳಾಲ ಉರೂಸ್ ನ ದಿನ ಈಗಾಗಲೇ ನಿಗದಿ ಮಾಡಲಾಗಿದೆ. ಎಪ್ರಿಲ್ 24 ರಿಂದ ಮೇ 18 ವರೆಗೆ ಉರೂಸ್ ನಡೆಯಲಿದೆ. ಎಲ್ಲರೂ ಒಗ್ಗಟ್ಟಾಗಿ ಉರೂಸನ್ನು ಯಶಸ್ವಿಯಾಗಿ ನೆರವೇರಿಸಬೇಕೆಂದು ಎಂದು ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು.

ರವಿವಾರ ನಡೆದ ಉರೂಸ್ ನ ದಿನ ಘೋಷಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಉಳ್ಳಾಲದಲ್ಲಿ ಧಾರ್ಮಿಕ ಶಿಕ್ಷಣ ರಂಗ ಅಭಿವೃದ್ಧಿ ಹೊಂದಲು ತಾಜುಲ್ ಉಲಮಾ ಅಬ್ದುಲ್ ರಹ್ಮಾನ್ ಕುಂಞಿ ಕೋಯ ತಂಙಳ್ ಕಾರಣರಾಗಿದ್ದಾರೆ. ಈ ಉರೂಸ್ ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿ ನಡೆಯುತ್ತಿಲ್ಲ. ಇಲ್ಲಿ ಜಾತಿ ಧರ್ಮ ಇಲ್ಲ. ಎಲ್ಲಾ ಧರ್ಮದವರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಎಲ್ಲರ ಸಹಕಾರ ಅಗತ್ಯ ಇದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮಾತನಾಡಿ, 2025ರ ಉರೂಸ್ ಯಶಸ್ವಿ ಆಗಬೇಕು.ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಹೇಳಿದರು.

ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ ಉಳ್ಳಾಲ ಉರೂಸ್ ನ ಧ್ವಜಾರೋಹಣ ಆಗಿದೆ. ಇನ್ನು ಉರೂಸ್ ಗೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮ ನಡೆಯಲಿದೆ. ಹಿಂದೂ , ಮುಸ್ಲಿಂ, ಕ್ರೈಸ್ತ ಎಂಬ ಭೇದ ಭಾವ ಇಲ್ಲದೇ ಸೌಹಾರ್ದತೆಯಿಂದ ನಡೆಯುವ ಈ ಉರೂಸ್ ಕಾರ್ಯಕ್ರಮದ ಎಲ್ಲಾ ನಿಯಮಗಳನ್ನು ನಾವು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಸ್ಪೀಕರ್ ಯುಟಿ ಖಾದರ್ ಮಾತನಾಡಿ, ಎಪ್ರಿಲ್ ತಿಂಗಳಲ್ಲಿ ಉಳ್ಳಾಲ ಉರೂಸ್ ನಡೆಯಲಿದ್ದು, ದಿನ ಯಾವಾಗ ಬರುತ್ತದೆ ಎಂದು ಭಕ್ತಾದಿಗಳು ಕಾಯುತ್ತಿರುತ್ತಾರೆ. ಈ ಬಾರಿ ಉರೂಸ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು ಖಾಝಿ ಸುಲ್ತಾನ್ ಉಲಮಾ ಎಪಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಲಿದೆ. ಇಲ್ಲಿ ಅಭಿವೃದ್ಧಿ ಕಾಣಲು ಇಲ್ಲಿನ ಮಣ್ಣಿನ ಗುಣ ಕಾರಣ ಎಂದರು.

ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು, . ಅತ್ತಾವುಲ್ಲಾ ತಂಙಳ್ ದುಆ ನೆರವೇರಿಸಿದರು.ಈ ಸಂದರ್ಭದಲ್ಲಿ ಉರೂಸ್ ನ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮ ದಲ್ಲಿ ಉಳ್ಳಾಲ ಜುಮಾ ಮಸೀದಿ ಖತೀಬ್ ಇಬ್ರಾಹೀಮ್ ಸಅದಿ, ಅರಬಿಕ್ ಕಾಲೇಜು ಪ್ರಾಂಶುಪಾಲ‌ ಅಹ್ಮದ್ ಕುಟ್ಟಿ ಸಖಾಫಿ, ದರ್ಗಾ ಮಾಜಿ ಅಧ್ಯಕ್ಷ ಹಾಜಿ ಕಣಚೂರು ಮೋನು, ಬಿ.ಎಂ.ಫಾರೂಕ್, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಜತೆ ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್ ಮೇಲಂಗಡಿ, ಕೋಶಾಧಿಕಾರಿ ನಾಝಿಮ್ ಮುಕ್ಕಚ್ಚೇರಿ, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ, ಜತೆ ಕಾರ್ಯದರ್ಶಿ ಸಯ್ಯಿದ್ ಜಲಾಲ್ ತಂಗಳ್, ಕೋಶಾಧಿಕಾರಿ ಮುಸ್ತಫ ದಾರಂದಬಾಗಿಲು, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಫಾರೂಕ್ ಯು.ಎಚ್. ಜಬ್ಬಾರ್ ಮೇಲಂಗಡಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಪಿಲಾರ್, ಜತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಕೋಡಿ, ಕೋಶಾಧಿಕಾರಿ ಫಾರೂಕ್ ಮುಕ್ಕಚ್ಚೇರಿ, ಅಬ್ದುಲ್ ರಶೀದ್ ಝೈನಿ, ಕೆಕೆಎಂ ಕಾಮಿಲ್ ಸಖಾಫಿ, ತೋಕೆ ಮುಹಿಯದ್ದೀನ್ ಕಾಮಿಲ್ ಸಖಾಫಿ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಎಸ್ ಎಂ ರಶೀದ್ ಹಾಜಿ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್, ದರ್ಗಾ ಮಾಜಿ ಅಧ್ಯಕ್ಷ ಹಂಝ ಹಾಜಿ, ಹೈದರ್ ಪರ್ತಿಪ್ಪಾಡಿ, ಹೈಸಮ್ ಶಾಕಿರ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.


Delete Edit


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News