ಉಳ್ಳಾಲ | ಬೈಕ್ ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು

Update: 2023-10-25 04:52 GMT

ಉಳ್ಳಾಲ, ಅ.25: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಮೂಲತಃ ಬಾಗಲಕೋಟೆಯ, ಪ್ರಸಕ್ತ ಬಬ್ಬುಕಟ್ಟೆಯಲ್ಲಿ ವಾಸವಿದ್ದ ಎಲ್ಲಮ್ಮ(45) ಎಂದು ಗುರುತಿಸಲಾಗಿದೆ.

ಎಲ್ಲಮ್ಮ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿಗೆ ಹೋಗಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ದೇರಳಕಟ್ಟೆ ಕಡೆಯಿಂದ ಆಗಮಿಸಿದ ದೈಗೋಳಿ ನಿವಾಸಿ ಗಗನ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಲ್ಲಮ್ಮರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ ಎಲ್ಲಮ್ಮ ಮೃತಪಟ್ಟಿದ್ದು, ಬೈಕ್ ಸವಾರ ಗಗನ್ ಕೂಡಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News