ಉಪ್ಪಿನಂಗಡಿ: ಅಪಾಯದ ಮಟ್ಟಕ್ಕೆ ತಲುಪುತ್ತಿರುವ ನೇತ್ರಾವತಿ, ಕುಮಾರಧಾರ ನದಿಗಳ ನೀರಿನ ಹರಿವು

Update: 2024-07-30 06:09 GMT

 ಉಪ್ಪಿನಂಗಡಿ:  ಭಾರೀ ಮಳೆಯಿಂದಾಗಿ ನೇತ್ರಾವತಿ ಮತ್ತು ಕುಮಾರದಾರ ನದಿಗಳ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಸದ್ಯ 29.09 ಮೀಟರ್‌ ನಷ್ಟು ನದಿ ನೀರಿನ ಹರಿವು ಇದ್ದು ಅಪಾಯದ ಮಟ್ಟ 31.05 ಆಗಿದೆ. 

ಇಲ್ಲಿನ ಹಳೆಗೇಟು ಎಂಬಲ್ಲಿ ಐತ ಮುಗೇರ ಎಂಬವರ ಮನೆ ಭಾಗಶಃ ನೀರಿನಲ್ಲಿ ಮುಳುಗಡೆಯಾಗಿದ್ದು, ಕುಟುಂಬವನ್ನು ಸ್ಥಳಾಂತರಿಸಲಾಗಿದೆ. ಪಂಜಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳು ಸಂಚರಿಸುತ್ತಿದೆ.

ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದ್ದು, ಸ್ಥಳೀಯ ಜನರು ಆತಂಕದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News