ಮಂಗಳೂರು ವಿಮಾನ ನಿಲ್ದಾಣದಲ್ಲಿ 61 ಲಕ್ಷ ರೂ. ಮೌಲ್ಯದ ಚಿನ್ನ ವಶ

Update: 2023-10-10 17:25 GMT

ಮಂಗಳೂರು, ಅ.10: ಅಬುಧಾಬಿಯಿಂದ ಸಾಗಿಸಲಾಗುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.9ರಂದು ವಶಪಡಿಸಿಕೊಂಡಿದ್ದಾರೆ.

ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News