ವಿಧಾನ ಪರಿಷತ್ ಉಪ ಚುನಾವಣೆ: ಪುತ್ತೂರಿನ ಕಿಶೋರ್ ಕುಮಾರ್‌ಗೆ ಬಿಜೆಪಿ ಟಿಕೆಟ್

Update: 2024-10-01 11:17 GMT

ಕಿಶೋರ್ ಕುಮಾರ್

ಮಂಗಳೂರು, ಅ.1: ಸ್ಥಳೀಯಾಡಳಿತ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿಯು ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿಗೆ ಟಿಕೆಟ್ ಘೋಷಿಸಿದೆ.

ಸಂಘಪರಿವಾರದ ಹಿನ್ನೆಲೆಯ ಕಿಶೋರ್ ಕುಮಾರ್ ಬೊಟ್ಯಾಡಿ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯ ದ.ಕ.‌ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರನ್ನು ಹಿಂದಿಕ್ಕಿ ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News