ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2024-09-20 14:05 GMT

ಮಂಗಳೂರು: ದ.ಕ.ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿ, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆ ಆಗಿರುವ ಎಲ್ಲಾ ನೀತಿ ಸಂಹಿತೆಗಳು ಈ ಚುನಾವಣೆಯಲ್ಲಿ ಅನ್ವಯವಾಗಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಪ್ರಚಾರ ಸಭೆಗಳಿಗೆ ಅನುಮತಿ ಪಡೆಯಬೇಕೆಂದು ಎಂದು ಡಿಸಿ ತಿಳಿಸಿದರು.

ವಿವಿಧ ಅನುಮತಿಗಳು ಒಂದೇ ಕಡೆ ಸಿಗುವಂತಾಗಲು ಏಕಗವಾಕ್ಷಿ ಕೇಂದ್ರ ಸ್ಥಾಪಿಸಲಾಗುವುದು ಎಂದ ಜಿಲ್ಲಾಧಿಕಾರಿ ಸ್ಥಳೀಯ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಿದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೊಷ್ ಕುಮಾರ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ನಿತಿನ್ ಕುಮಾರ್, ಗುರುಚರಣ್, ನೀರಜ್‌ಪಾಲ್, ಮುನೀರ್ ಮುಕ್ಕಚೇರಿ, ಶನೋನ್ ಲಾರೆನ್ಸ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News