ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್: ಮನು ಶೆಟ್ಟಿ ಆಯ್ಕೆ
Update: 2025-03-25 00:04 IST

ಉಡುಪಿ: ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮನು ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆದ ಮಂಗಳೂರು, ಕೊಡಗು ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಸ್ಪರ್ಧೆ ಯಲ್ಲಿ ಮೂರು ಜಿಲ್ಲೆಗಳ ಸುಮಾರು ೧೫೦ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ೧೦ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಮಾ.೨೭ರಂದು ರಾಜ್ಯ ಮಟ್ಟದ ’ವಿಕಸಿತ ಭಾರತ ಯುತ್ ಪಾರ್ಲಿಮೆಂಟ್ - ೨೦೨೫’ ಕಾರ್ಯಕ್ರಮವು ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಯಲಿದೆ.