ವಿಟ್ಲ: ಜಗಳದ ಮಧ್ಯೆ ದೂಡಿ ಹಾಕಿದ ಪತಿ ; ಗಂಭೀರ ಗಾಯಗೊಂಡಿದ್ದ ಪತ್ನಿ ಮೃತ್ಯು

Update: 2024-12-13 08:46 GMT

ವಿಟ್ಲ: ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು  ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎಂಬ ಮಾಹಿತಿ ಸಾರ್ವಜನಿಕರಿಂದ ತಿಳಿದು ಬಂದಿದೆ.

ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದೀಗ ಗುರುವಾರ ಮುಂಜಾನೆ ಲೀಲಾರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ವಿಟ್ಲ ಪೋಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News