ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ʼವಿಶ್ವ ಮಾನವ ಹಕ್ಕುಗಳ ದಿನಾಚರಣೆʼ
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಹಿನ್ನೆಲೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬಿಐಟಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್, ಬಿಐಟಿ-ಎನ್ ಎಸ್ ಎಸ್ (NSS) ಮತ್ತು BIT-ADVA ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಬಂಧುತ್ವ ಚಾರಿಟೇಬಲ್ ಟ್ರಸ್ಟ್ (ರಿ) ಸ್ಥಾಪಕ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಭಾಗವಹಿಸಿ ಜನರ ಹಕ್ಕುಗಳನ್ನು ಅರ್ಥ ಮಾಡಿಕೊಳ್ಳುವುದು, ಧರ್ಮಾಧಾರಿತ ವಿಭಜನೆಗಳ ತಿರಸ್ಕರಿಸುವುದು ಮತ್ತು ಸಾಮರಸ್ಯದ ಸಮಾಜ ನಿರ್ಮಾಣದ ಮಹತ್ವದ ಬಗ್ಗೆ ಮಾತನಾಡಿದ್ದಾರೆ.
ಕಾರ್ಯಕ್ರಮದಲ್ಲಿ ಬಿಐಟಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಕಫೀಲ್ ದೆಲ್ವಿ ಮಾತನಾಡಿದ್ದು, ಸಮಾನತೆ ಮತ್ತು ನ್ಯಾಯವನ್ನು ಕಾಪಾಡುವಲ್ಲಿ ಮಾನವ ಹಕ್ಕುಗಳ ದಿನದ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನಾಟಕ ಸ್ಪರ್ಧೆ, ಭಾಷಣ ಸ್ಪರ್ಧೆ, ರೀಲ್ಸ್ ಮಾಡುವ ಸ್ಪರ್ಧೆ, ಪೋಸ್ಟರ್ ತಯಾರಿಕೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿವಿಧ ವಿಭಾಗದ ಪ್ರಾಧ್ಯಾಪಕರು ತೀರ್ಪುಗಾರರಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಮೆಹಬೂಬ್ ಮುಝಾವರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿದ್ದಾರೆ. ಕಾರ್ಯಕ್ರಮದಲ್ಲಿ ಪ್ರೊ. ಸೌಧ ಧನ್ಯವಾದವನ್ನು ಸಮರ್ಪಣೆ ಮಾಡಿದ್ದು. ವಿದ್ಯಾರ್ಥಿನಿ ಸುಮೈಯಾ ನಸೀರ್ ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದಾರೆ.