ಯೆನೆಪೋಯ ವಿವಿ: ಪ್ರವೇಶಾತಿ ಆರಂಭ

Update: 2023-08-03 16:23 GMT

ಮಂಗಳೂರು: ಯೆನೆಪೋಯ ವಿವಿಯ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ (YIASCM) ಇದರ ಅಡಿಯಲ್ಲಿ ಶೈಕ್ಷಣಿಕ ವರ್ಷ 2023-24ರ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ.

ಸಿಯುಟಿಯು (ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅರ್ಹತೆಯನ್ನು ಪಡೆದು ಕೊಂಡಿರುವ ಆಸಕ್ತ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಯೆನೆಪೋಯ ವಿಶ್ವವಿದ್ಯಾನಿಲಯದ ವೆಬ್‌ಸೈಟ್ https://www.yenepoya.edu.in ನ್ನು ಸಂಪರ್ಕಿಸಲು ವಿನಂತಿಸಲಾಗಿದೆ. ಸೀಟ್ ಮ್ಯಾಟ್ರಿಕ್ಸ್, ಶುಲ್ಕ ಪಾವತಿ, ಅಡ್ಮಿಷನ್ ಕ್ಯಾಲೆಂಡರ್ ಹಾಗೂ ಇತರ ಮಾಹಿತಿ https://www.yenepoya.edu.in  ಇಲ್ಲಿ ಲಭ್ಯವಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು https://admissions.yenepoya.edu.in ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News