ಯುವ ಪತ್ರಕರ್ತರಿಗೆ ಪುನಃಶ್ಚೇತನಾ ಶಿಬಿರ ಅಗತ್ಯ: ಸಂಜಯ ಪ್ರಭು

Update: 2024-08-31 13:50 GMT

ಮಂಗಳೂರು: ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಯುವ ಪತ್ರಕರ್ತರಿಗೆ ಆಗಾಗ ಪುನಃಶ್ಚೇತನಾ ಶಿಬಿರಗಳನ್ನು ಆಯೋಜಿಸುವುದು ಅಗತ್ಯ ಎಂದು ಎಂದು ತರ್ಜನಿ ಕಮ್ಯುನಿಕೇಶನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಸಂಜಯ ಪ್ರಭು ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಇ-ಪೇಪರ್‌ನ ತೃತೀಯ ಸಂಚಿಕೆಯನ್ನು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ಹಿರಿಯ ಪತ್ರಕರ್ತರ ಸಾಧನೆ ಹಾಗೂ ಅನುಭವವನ್ನು ಯುವ ಪತ್ರಕರ್ತರು ಅರಿತುಕೊಂಡರೆ ಅವರಿಗೆ ತಮ್ಮ ವೃತ್ತಿಬದುಕಿನ ಸವಾಲುಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯವಾಗುತ್ತದೆ ಎಂದ ಅವರು ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ದಾಖಲಿಸುವ ನಿಟ್ಟಿನಲ್ಲಿ ಮಂಗಳೂರು ಮಂಗಳೂರು ಪ್ರೆಸ್ ಕ್ಲಬ್ ‘ಮಂಗಳೂರು ಪ್ರೆಸ್ ಕ್ಲಬ್’ ಸಮಾಚಾರ ಎಂಬ ಪತ್ರಿಕೆಯನ್ನು ಹೊರ ತರುತ್ತಿರು ವುದು ಶ್ಲಾಘನೀಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಪ್ರೆಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಮಾತನಾಡಿ ಪತ್ರಕರ್ತರಿಗೆ ನೀಡಲಾಗುವ ಬಸ್ ಪಾಸ್ ಸಹಿತ ಸರಕಾರದಿಂದ ಪತ್ರಕರ್ತರಿಗೆ ದೊರೆಯುತ್ತಿರುವ ವಿವಿಧ ಸೌಲಭ್ಯಗಳ ಬಗ್ಗೆ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರದಲ್ಲಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ. ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ಬಿ.ರವೀಂದ್ರ ಶೆಟ್ಟಿ, ಮಹಮ್ಮದ್ ಆರಿಫ್ ಪಡುಬಿದ್ರಿ, ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಸ್ವಾಗತಿಸಿದರು.ಕೋಶಾಧಿಕಾರಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News