ಯುವಕ ಆತ್ಮಹತ್ಯೆ ಪ್ರಕರಣ: 8 ಮಂದಿಯ ವಿರುದ್ಧ ಪ್ರಕರಣ ದಾಖಲು
Update: 2023-08-28 15:50 GMT
ಪುತ್ತೂರು; ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿರುದ್ಧ ಸಂಪ್ಯಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆ.22ರಂದು ಲೈವ್ ವೀಡಿಯೋ ನಡೆಸಿ ನಾನು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪುತ್ತೂರು ತಾಲೂಕಿನ ಕಟ್ಟತ್ತಾರು ಕಡ್ಯಾಣ ನಿವಾಸಿ ಅಬ್ದುಲ್ ನಾಸಿರ್(27) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದರು. ಈ ಬಗ್ಗೆ ಮೃತನ ತಾಯಿ ನೀಡಿದ ದೂರಿನಂತೆ ಸುಮಯ್ಯ, ಅದ್ರಾಮ, ಮೊಯಿದು, ತಾಜು, ಅಬ್ದುಲ್ಲಾ, ಸಮೀರ್, ನೌಫಲ್ ಮತ್ತು ಅತ್ತಾವುಲ್ಲಾ ಎಂಬವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.