ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಅದಾನಿ ಹಗರಣ, ಸಂಭಲ್ ಪ್ರಕರಣ | ಕಲಾಪ ಮಧ್ಯಾಹ್ನ 12ಕ್ಕೆ ಮುಂದೂಡಿಕೆ

Update: 2024-11-27 08:11 GMT

Photo credit: PTI

ಹೊಸದಿಲ್ಲಿ: ಪ್ರತಿಪಕ್ಷಗಳ ಗದ್ದಲದಿಂದಾಗಿ ಲೋಕಸಭೆ ಬುಧವಾರ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಲ್ಪಟ್ಟಿತು.

ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಆರಂಭವಾಯಿತು. ಬಿಜೆಪಿ ಸಂಸದ ಅರುಣ್ ಗೋವಿಲ್ ಸದನದಲ್ಲಿ ಮಾತನಾಡುತ್ತಿದ್ದ ವೇಳೆ ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗಿದರು. ಸಂಸದರು ಶಾಂತಿ ಕಾಪಾಡುವಂತೆ ಸ್ಪೀಕರ್ ಓಂ ಬಿರ್ಲಾ ಒತ್ತಾಯಿಸಿದರು.

ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಉತ್ತರ ಪ್ರದೇಶದ ಸಂಭಾಲ್ ಗಲಭೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿ ಸದನದ ಗಮನ ಸೆಳೆದರು. ರಾಜ್ಯದಲ್ಲಿ ಉಪಚುನಾವಣೆಯಲ್ಲಿ NDA 9 ರಲ್ಲಿ 7 ಸ್ಥಾನಗಳನ್ನು ಗೆದ್ದ ನಂತರ ನಡೆದ ಈ ಘಟನೆಯು ರಾಜ್ಯ ಸರ್ಕಾರ ಮತ್ತು ಬಿಜೆಪಿಯ ಉದ್ದೇಶಗಳ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ಸಂವಿಧಾನದ ಬಗ್ಗೆ 2 ದಿನಗಳ ಚರ್ಚೆಗೆ ಒತ್ತಾಯಿಸಿದರು. ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಅದಾನಿ ಹಗರಣದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದಾಗ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News