ಉತ್ತರಾಖಂಡದಲ್ಲಿ ಕಮರಿಗೆ ಬಿದ್ದ ಬಸ್: 23 ಮಂದಿ ಮೃತ್ಯು

Update: 2024-11-04 07:24 GMT

Screengrab:X/@ANI

ಉತ್ತರಾಖಂಡ: ಅಲ್ಮೋರಾದಲ್ಲಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ 40ಕ್ಕೂ ಅಧಿಕ ಮಂದಿ ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಹೇಳಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.

ಅಲ್ಮೋರಾ ಜಿಲ್ಲೆಯ ಮಾರ್ಚುಲಾದಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ಆಘಾತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News