ತಪ್ಪು ದಾರಿಗೆಳೆಯುವ ಜಾಹಿರಾತು ನೀಡಿದರೆ 1 ಕೋಟಿ ರೂ. ದಂಡ: ಪತಂಜಲಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Update: 2023-11-21 16:16 GMT

ಸುಪ್ರೀಂ ಕೋರ್ಟ್ | Photo: PTI

ಹೊಸದಿಲ್ಲಿ: ಅಲೋಪತಿ ಔಷಧಗಳನ್ನು ಗುರಿಯಾಗಿಟ್ಟುಕೊಂಡು ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ದ್ವಿ ಸದಸ್ಯ ಪೀಠವು, ತನ್ನ ಉತ್ಪನ್ನಗಳು ಕೆಲವು ಕಾಯಿಲೆಗಳನ್ನು ʼಗುಣಪಡಿಸಬಹುದುʼ ಎಂದು ಸುಳ್ಳು ಹೇಳಿಕೆ ನೀಡಿದರೆ 1 ಕೋಟಿ ರೂಪಾಯಿ ದಂಡ ವಿಧಿಸಲಾಗುವುದು ಎಂದು ಪತಂಜಲಿಗೆ ಎಚ್ಚರಿಸಿದೆ.

ಭವಿಷ್ಯದಲ್ಲಿ ಇಂತಹ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವಂತೆ ಪತಂಜಲಿ ಆಯುರ್ವೇದ್ಗೆ ನ್ಯಾಯಾಲಯ ಸೂಚಿಸಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ನಿರ್ದೇಶನ ನೀಡಿದೆ. ಪತಂಜಲಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳು ಅಲೋಪತಿಯನ್ನು ಅವಹೇಳನ ಮಾಡುತ್ತವೆ ಮತ್ತು ಕೆಲವು ಕಾಯಿಲೆಗಳನ್ನು ಗುಣಪಡಿಸುವ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪತಂಜಲಿಯ ಹಕ್ಕುಗಳನ್ನು ಪರಿಶೀಲಿಸಲಾಗಿಲ್ಲ ಅಲ್ಲದೆ, ಅವು ಡ್ರಗ್ಸ್ ಮತ್ತು ಇತರ ಮ್ಯಾಜಿಕ್ ಪರಿಹಾರಗಳ ಕಾಯಿದೆ, 1954 ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆ, 2019 ರಂತಹ ಕಾನೂನುಗಳ ನೇರ ಉಲ್ಲಂಘನೆಯಾಗಿದೆ ಎಂದು IMA ವಾದಿಸಿದೆ.

ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 5, 2024 ಕ್ಕೆ ನಿಗದಿಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News