ದಿಲ್ಲಿಯ ಕರೋಲ್ ಭಾಗ್ ನಲ್ಲಿ ಮನೆ ಕುಸಿತ: ಹಲವರು ಸಿಲುಕಿರುವ ಶಂಕೆ, 12 ಮಂದಿಯ ರಕ್ಷಣೆ

Update: 2024-09-18 09:03 GMT

Photo: X

ಹೊಸದಿಲ್ಲಿ: ಬುಧವಾರ ಬೆಳಗ್ಗೆ ಕೇಂದ್ರ ದಿಲ್ಲಿಯ ಕರೋಲ್ ಭಾಗ್ ನಲ್ಲಿ ಮನೆಯೊಂದು ಕುಸಿದಿದ್ದು, ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಲ್ಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರ ಪ್ರಕಾರ, ಕರೋಲ್ ಭಾಗ್ ನಲ್ಲಿರುವ ಪ್ರಶಾದ್ ನಗರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ ಎಂಬ ಮಾಹಿತಿ ಬೆಳಗ್ಗೆ 9.12ರ ವೇಳೆಗೆ ನಮಗೆ ಬಂದಿತು. ಸುದ್ದಿ ತಿಳಿಯುತ್ತಿದ್ದಂತೆಯೆ ನಾವು ಸ್ಥಳಕ್ಕೆ ಧಾವಿಸಿದೆವು ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮೂರು ಅಂತಸ್ತಿನ ಕಟ್ಟಡದ ಪಾರ್ಶ್ವವೊಂದು ಕುಸಿದು ಬಿದ್ದಿರುವುದು ಅಗ್ನಿಶಾಮಕ ದಳದ ಸಿಬ್ಬಂದಿಗಳ ಗಮನಕ್ಕೆ ಬಂದಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದ ಹಲವರನ್ನು ನಂತರ ರಕ್ಷಿಸಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

“ನಾವು ಈವರೆಗೆ 12 ಮಂದಿಯನ್ನು ರಕ್ಷಿಸಿದ್ದು, ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇನ್ನಿತರ ರಕ್ಷಣಾ ಕಾರ್ಯಾಚರಣೆ ಸಂಸ್ಥೆಗಳೊಂದಿಗೆ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ” ಎಂದು ಕೇಂದ್ರ ದಿಲ್ಲಿಯ ಉಪ ಪೊಲೀಸ್ ಆಯುಕ್ತ ಎಂ.ಹರ್ಷ್ ವರ್ಧನ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News