ಜಾರ್ಖಂಡ್ ಅರಣ್ಯದಲ್ಲಿ ಗುಂಡಿನ ಚಕಮಕಿ: ಇಬ್ಬರು ಪೊಲೀಸರು ಮೃತ್ಯು

Update: 2024-02-08 08:36 IST
ಜಾರ್ಖಂಡ್ ಅರಣ್ಯದಲ್ಲಿ ಗುಂಡಿನ ಚಕಮಕಿ: ಇಬ್ಬರು ಪೊಲೀಸರು ಮೃತ್ಯು

ಸಾಂದರ್ಭಿಕ ಚಿತ್ರ

  • whatsapp icon

ಛಾತ್ರಾ: ನಿಷೇಧಿತ ತೃತೀಯ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‍ಪಿಸಿ) ಮತ್ತು ಪೊಲೀಸರ ನಡುವೆ ಜಾರ್ಖಂಡ್‍ನ ಛಾತ್ರಾ ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟು, ಇತರ ಮೂವರು ಗಾಯಗೊಂಡಿದ್ದಾರೆ. ತೀವ್ರ ಗಾಯಗೊಂಡಿರುವ ಪೊಲೀಸ್ ಪೇದೆಯೊಬ್ಬರನ್ನು ವಿಮಾನ ಆ್ಯಂಬುಲೆನ್ಸ್‍ನಲ್ಲಿ ರಾಂಚಿಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಚಂಪೈ ಸೊರೆನ್ ಈ ದಾಳಿಯನ್ನು ಖಂಡಿಸಿದ್ದು, ಗಾಯಾಳು ಪೊಲೀಸರಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯವಿರುವ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. "ಹುತಾತ್ಮರಾಗಿರುವ ಪೊಲೀಸರ ಕುಟುಂಬಗಳ ಜತೆ ಸರ್ಕಾರ ನಿಲ್ಲುತ್ತದೆ ಹಾಗೂ ಅವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತದೆ" ಎಂದು ಅವರು ಹೇಳಿದ್ದಾರೆ. ಭಯೋತ್ಪಾದನೆ ತಡೆಗೆ ಎಲ್ಲ ಪ್ರಯತ್ನಗಳನ್ನು ಸರ್ಕಾರ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News