ಹರ್ಯಾಣ: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ
Update: 2024-10-09 10:04 GMT
ಹರ್ಯಾಣ: ಹರ್ಯಾಣದಲ್ಲಿ ಬಹುಮತ ಪಡೆದು ಬಿಜೆಪಿ ಸರಕಾರ ರಚನೆಗೆ ಮುಂದಾಗುತ್ತಿದ್ದಂತೆ ಇಬ್ಬರು ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತವನ್ನು ಪಡೆದುಕೊಂಡಿತ್ತು. ಇದೀಗ ಬಿಜೆಪಿಗೆ ಮತ್ತಿಬ್ಬರು ಶಾಸಕರ ಬೆಂಬಲ ಸಿಕ್ಕಿದಂತಾಗಿದೆ.
ಸ್ವತಂತ್ರ ಶಾಸಕರಾದ ದೇವೆಂದರ್ ಕಾಡ್ಯನ್ ಮತ್ತು ರಾಜೇಶ್ ಜೂನ್ ಅವರು ಕೇಂದ್ರ ಸಚಿವ ಮತ್ತು ಹರ್ಯಾಣ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರ ನಿವಾಸದಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ದೇವೆಂದರ್ ಕಾಡ್ಯನ್ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿದ್ದ ರಾಜೇಶ್ ಜೂನ್ ಬಹದ್ದೂರ್ಗಢದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು.