ತೆಲಂಗಾಣದಲ್ಲಿ ಪತನವಾದ ವಾಯುಪಡೆಯ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವು
Update: 2023-12-04 08:07 GMT
ಹೊಸದಿಲ್ಲಿ: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಪತನಗೊಂಡ ತರಬೇತಿ ವಿಮಾನದಲ್ಲಿದ್ದ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (ಎಎಫ್‌ಎ) ಹೊರಟಿದ್ದಾಗ ಅಪಘಾತ ಸಂಭವಿಸಿದೆ. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು ಮತ್ತು ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ndtv.com ವರದಿ ಮಾಡಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೃತ ಪೈಲಟ್‌ಗಳ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
"ಹೈದರಾಬಾದ್ ಬಳಿ ನಡೆದ ಈ ಅಪಘಾತದಿಂದ ದುಃಖವಾಗಿದೆ. ಇಬ್ಬರು ಪೈಲಟ್‌ಗಳು ಪ್ರಾಣ ಕಳೆದುಕೊಂಡಿರುವುದು ತುಂಬಾ ದುಃಖಕರವಾಗಿದೆ. ಈ ದುರಂತ ಸಮಯದಲ್ಲಿ, ನನ್ನ ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ" ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.