2024ರ ಲೋಕಸಭಾ ಚುನಾವಣೆ : ಸಂಭಾವ್ಯ ಮೈತ್ರಿಗಳ ಕುರಿತು ಚರ್ಚಿಸಲು ಕಾಂಗ್ರೆಸ್ ನಿಂದ ಐವರು ಸದಸ್ಯರ ಸಮಿತಿ

Update: 2023-12-19 17:12 GMT

Photo: ANI 

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಇತರ ರಾಜಕೀಯ ಪಕ್ಷಗಳೊಂದಿಗೆ ಸಂಭಾವ್ಯ ಮೈತ್ರಿಗಳಿಗೆ ಸಂಬಂಧಿಸಿದಂತೆ ಚರ್ಚೆಗಳನ್ನು ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.

ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ನೇತೃತ್ವದ ರಾಷ್ಟ್ರೀಯ ಮೈತ್ರಿ ಸಮಿತಿಯಲ್ಲಿ ಸದಸ್ಯರನ್ನಾಗಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಹಿರಿಯ ನಾಯಕ ಮೋಹನ್ ಪ್ರಕಾಶ ಅವರನ್ನು ನೇಮಕಗೊಳಿಸಲಾಗಿದೆ.

2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುವ ಮತ್ತು ಆ ಬಗ್ಗೆ ಚರ್ಚಿಸುವ ಹೊಣೆಯನ್ನು ಸಮಿತಿಗೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದವು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News