ಮುಂಬೈ ಸ್ಪೋಟ ಪ್ರಕರಣ: ತಹವ್ವುರ್ ರಾಣಾನನ್ನು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರುವ ಸಾಧ್ಯತೆ

Update: 2025-04-09 11:44 IST
ಮುಂಬೈ ಸ್ಪೋಟ ಪ್ರಕರಣ: ತಹವ್ವುರ್ ರಾಣಾನನ್ನು ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರುವ ಸಾಧ್ಯತೆ

ತಹವ್ವುರ್ ರಾಣಾ (Photo credit: ANI)

  • whatsapp icon

ಹೊಸದಿಲ್ಲಿ: 2008ರ ಮುಂಬೈ ದಾಳಿ ಘಟನೆಯ ಆರೋಪಿ ತಹವ್ವುರ್ ರಾಣಾನನ್ನು ಬುಧವಾರ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ. ಆತನನ್ನು ಮೊದಲು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಭಾರತಕ್ಕೆ ಗಡೀಪಾರು ಮಾಡುವ ಆದೇಶಕ್ಕೆ ತುರ್ತು ತಡೆಯಾಜ್ಞೆ ನೀಡಬೇಕು ಎಂದು ತಹವ್ವುರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂಕೋರ್ಟ್ ತಳ್ಳಿಹಾಕಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಹವ್ವುರ್ ರಾಣಾ ಹಸ್ತಾಂತರಕ್ಕೆ ಸಮ್ಮತಿಸಿದ್ದರು.

ತಹವ್ವುರ್ ರಾಣಾನನ್ನು ಭಾರತಕ್ಕೆ ಕರೆತರುವ ಹಿನ್ನೆಲೆಯಲ್ಲಿ ದಿಲ್ಲಿ ಮತ್ತು ಮುಂಬೈ ಜೈಲಿನಲ್ಲಿ ವಿಶೇಷ ಸೆಲ್ ವ್ಯವಸ್ಥೆ ಮಾಡಲಾಗಿದೆ. ಅಮೆರಿಕ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ ಸೆಲ್‌ನಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಲಾಗಿದೆ. ಭಾರತಕ್ಕೆ ಬಂದ ತಹವ್ವುರ್ ರಾಣಾನನ್ನು ಮೊದಲು ಎನ್ಐಎ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News