ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು; CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ

Update: 2023-09-29 16:21 GMT

ಸಾಂದರ್ಭಿಕ ಚಿತ್ರ | PTI 

ಹೊಸದಿಲ್ಲಿ: ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ನೆರೆಯ ರಾಜ್ಯ ತಮಿಳುನಾಡಿಗೆ ಪ್ರತಿ ಸೆಕೆಂಡಿಗೆ 3 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕೆಂದು ಕರ್ನಾಟಕ ಸರಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC)ಯು ಸೆಪ್ಟೆಂಬರ್ 26ರಂದು ನೀಡಿದ್ದ ಆದೇಶವನ್ನು ಕಾವೇರಿ ಜಲನಿರ್ವಹಣಾ ಪ್ರಾಧಿಕಾರವು ಶುಕ್ರವಾರ ಎತ್ತಿಹಿಡಿದಿದೆ.

ಇಂದು ಹೊಸದಿಲ್ಲಿಯಲ್ಲಿ ಸಭೆ ಸೇರಿದ ಕಾವೇರಿ ಜಲನಿರ್ವಹಣಾ ಪ್ರಾಧಿಕಾರವು (CWRA), CWRC ಯ ಆದೇಶವನ್ನು ಎತ್ತಿಹಿಡಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News