ರಷ್ಯಾ: ನೀರಿನಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಮೃತ್ಯು
Update: 2024-06-07 07:18 GMT
ಸೇಂಟ್ ಪೀಟರ್ಸ್‌ಬರ್ಗ್: ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್ ಬಳಿಯ ನದಿಯೊಂದರಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಯಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳ ಮೃತದೇಹಗಳ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.
ನದಿಗೆ ಓರ್ವ ವಿದ್ಯಾರ್ಥಿನಿಯೂ ಬಿದ್ದಿದ್ದು, ಆಕೆಯನ್ನು ರಕ್ಷಿಸಿ, ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನು ಜಲಗಾಂವ್ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್ ದೃಢಪಡಿಸಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮೃತದೇಹಗಳನ್ನು ವಶಪಡಿಸಿಕೊಂಡು, ಅವನ್ನು ಆದಷ್ಟೂ ಶೀಘ್ರವಾಗಿ ಭಾರತಕ್ಕೆ ರವಾನಿಸಲು ರಷ್ಯಾದಲ್ಲಿನ ಭಾರತೀಯ ರಾಜತಾಂತ್ರಿಕ ಕಚೇರಿ ಹಾಗೂ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿನ ದೂತಾವಾಸವು ಸ್ಥಳೀಯ ಪ್ರಾಧಿಕಾರಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.