ಪಂಜಾಬ್‌| ಎರಡು ಗುಂಪುಗಳ ನಡುವೆ ಗುಂಡಿನ ದಾಳಿ: ನಾಲ್ವರು ಮೃತ್ಯು

Update: 2024-07-08 05:44 GMT

ಸಾಂದರ್ಭಿಕ ಚಿತ್ರ (PTI)

ಚಂಡೀಗಢ: ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಘಟನೆ ಪಂಜಾಬ್‌ನ ಗುರುದಾಸಪುರ ಜಿಲ್ಲೆಯ ಬಟಾಲಾದ ವಿತ್ವಾನ್ ಗ್ರಾಮದಲ್ಲಿ ರವಿವಾರ ನಡೆದಿದೆ.

13 ಮಂದಿಯಿದ್ದ ಎರಡು ಗುಂಪುಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಘಟನೆಗೆ ಹಳೆ ವೈಷಮ್ಯ ಕಾರಣ ಎನ್ನಲಾಗಿದೆ.

ದಾಳಿಯಲ್ಲಿ ಪ್ರತಿ ಗುಂಪಿನಿಂದ ಇಬ್ಬರು ಮೃತಪಟ್ಟಿದ್ದಾರೆ. 8 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News