ಉತ್ತರಪ್ರದೇಶ: ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರಪ್ರದೇಶ: ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಸೆ.26ರಂದು ಬಾಲಕ ಅನಾರೋಗ್ಯಕ್ಕೆ ತುತ್ತಾಗಿದ್ದ. ಈ ವೇಳೆ ಬಾಲಕನ ದೇಹದ ಮೇಲಿನ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ ಅವನು ತನ್ನ ಪೋಷಕರಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ.
ಬಾಲಕನ ಕುಟುಂಬಸ್ಥರ ದೂರಿನ ಪ್ರಕಾರ, ಇಬ್ಬರು ಆರೋಪಿಗಳು ಬಾಲಕನನ್ನು ಅವನ ಮನೆಯಿಂದ ಕರೆದೊಯ್ದು ನಂತರ ಹತ್ತಿರದ ಜಮೀನಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ದೃಶ್ಯವನ್ನು ಅಲ್ಲೆ ಮೇಕೆ ಮೇಯಿಸುತ್ತಿದ್ದ ಮತ್ತಿಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಘಟನೆಯ ಬಗ್ಗೆ ಪ್ರಶ್ನಿಸಲು ಆರೋಪಿಗಳ ಮನೆಗೆ ಹೋದಾಗ ನಿಂದಿಸಿ ಥಳಿಸಲಾಗಿದೆ ಮತ್ತು ಬಾಲಕನನ್ನು ಕೊಲೆ ಮಾಡುವುದಾಗಿ ಬೆದರಿಸಲಾಗಿದೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದೀಗ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಹಾಪುರ್ ಪೊಲೀಸ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್, ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.