ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ; ಜಮ್ಮು, ಕಾಶ್ಮೀರದಲ್ಲಿ ಕಂಪನದ ಅನುಭವ
Update: 2025-04-12 16:15 IST

ಸಾಂದರ್ಭಿಕ ಚಿತ್ರ (PTI)
ಶ್ರೀನಗರ: ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುಕಾಶ್ಮೀರ ಕಣಿವೆಯ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ, ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ.
ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, ಭೂಕಂಪದ ಕೇಂದ್ರ ಬಿಂದು ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದು, 10 ಕಿಲೋಮೀಟರ್ ಆಳದಲ್ಲಿದೆ ಎಂದು ತಿಳಿಸಿದೆ.