ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.9 ತೀವ್ರತೆಯ ಭೂಕಂಪ

Update: 2023-07-29 05:27 GMT

ಪೋರ್ಟ್ ಬ್ಲೇರ್: ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಿಗ್ಗೆ 5.9 ತೀವ್ರತೆಯ ಭೂಕಂಪನ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್ ನ ಆಗ್ನೇಯಕ್ಕೆ 126 ಕಿ.ಮೀ. ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.

ಭೂಕಂಪವು ರಾತ್ರಿ 12:53 ಕ್ಕೆ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News