ಕೇರಳದಲ್ಲಿ 5ನೇ ನಿಫಾ ಪ್ರಕರಣ ಪತ್ತೆ: ಸಂಪರ್ಕಿತರ ಪಟ್ಟಿಯಲ್ಲಿ 789 ಮಂದಿ

Update: 2023-09-14 02:52 GMT

ಕೋಝಿಕ್ಕೋಡ್: ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 24 ವರ್ಷದ ವ್ಯಕ್ತಿಯೊಬ್ಬರಲ್ಲಿ ನಿಫಾ ವೈರಸ್ ಜ್ವರ ಇರುವುದು ಬುಧವಾರ ಪತ್ತೆಯಾಗಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಸೇರಿದಂತೆ ನಾಲ್ಕು ಮಂದಿಯಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ನಿಫಾ ವೈರಸ್ ಸೋಂಕು ಬೆಳಕಿಗೆ ಬಂದಿದೆ. ಈ ಆರೋಗ್ಯ ಕಾರ್ಯಕರ್ತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸುವಂತೆ ಕೋಝಿಕ್ಕೋಡ್ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 24ರ ವರೆಗೆ ಎಲ್ಲ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಿಷೇಧಿಸಿ, ಮಾಸ್ಕ್ ಕಡ್ಡಾಯಪಡಿಸಲಾಗಿದೆ.

ಕಂಟೈನ್ಮೆಂಟ್ ವಲಯಗಳು ಬುಧವಾರ 43ರಿಂದ 58ಕ್ಕೇರಿದೆ. ಈ ರೋಗಿಗಳ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡುವ ಕಾರ್ಯವನ್ನು ಆರೋಗ್ಯ ಇಲಾಖೆ ಮುಂದುವರಿಸಿದ್ದು, ಒಟ್ಟು 789 ಮಂದಿಯ ಪಟ್ಟಿ ಸಿದ್ಧಪಡಿಸಿ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News