ತಮಿಳುನಾಡು | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಆರು ಮಂದಿ ಮೃತ್ಯು
Update: 2025-01-04 07:12 GMT
ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸುತ್ತೂರು ಪ್ರದೇಶದ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯ ವೇಳೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಹೇಳಲಾಗಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿಗಳು ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.