ಮಣಿಪುರದಲ್ಲಿ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಮತ್ತೆ 7 ಮಂದಿ ಆರೋಪಿಗಳ ಬಂಧನ

Update: 2024-11-24 05:38 GMT

Photo | PTI

ಇಂಫಾಲ್: ಮಣಿಪುರದ ಇಂಫಾಲ್ ಕಣಿವೆಯಲ್ಲಿ ನಾಲ್ವರು ಶಾಸಕರ ನಿವಾಸಗಳಿಗೆ ಬೆಂಕಿ ಹಚ್ಚಿ ಹಾನಿಯನ್ನುಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಜನ ಆರೋಪಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ.

ಮಣಿಪುರದ ಕಕ್ಚಿಂಗ್ ಜಿಲ್ಲೆಯ ಪೊಲೀಸರು ಮೂವರು ಆರೋಪಿಗಳನ್ನು ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಂಧನ ಕಳೆದ ಎರಡು ದಿನಗಳಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಈವೆರೆಗೆ ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ಮಣಿಪುರ ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಫಾಲ್ ಕಣಿವೆಯಲ್ಲಿ ನವೆಂಬರ್ 16ರಂದು ಪ್ರಜಾಪ್ರಭುತ್ವದ ಆಂದೋಲನದ ಹೆಸರಿನಲ್ಲಿ ಕೆಲವು ಗುಂಪು ಮಂತ್ರಿಗಳು ಮತ್ತು ಶಾಸಕರ ನಿವಾಸಗಳಿಗೆ ನುಗ್ಗಿ ದಾಂಧಲೆ ನಡೆಸಿ ಬೆಂಕಿ ಹಚ್ಚಿದ್ದರು. ಸಿಸಿಟಿವಿ ಮೂಲಕ ಶಂಕಿತರನ್ನು ಗುರುತಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಣಿಪುರದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸಾರ್ವಜನಿಕವಾಗಿ ಹೇಳಲು ನನಗೆ ನಾಚಿಕೆಯಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News