ಛತ್ತೀಸ್ ಗಢ | ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ ನಕ್ಸಲರು: ಎಂಟು ಯೋಧರು ಸೇರಿದಂತೆ 9 ಮಂದಿ ಮೃತ್ಯು
Update: 2025-01-06 10:29 GMT
ರಾಯ್ಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳು ತೆರಳುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಐಇಡಿ ಸ್ಫೋಟಕ ಬಳಸಿ ಸ್ಫೋಟಿಸಿದ್ದು, 8 ಸೈನಿಕರು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಛತ್ತೀಸ್ ಗಢದ ಬಿಜಾಪುರದಲ್ಲಿ ಮಧ್ಯಾಹ್ನ 2.15ಕ್ಕೆ ಸರಿಯಾಗಿ ನಕ್ಸಲರು ವಾಹನ ಸ್ಫೋಟಿಸಿದ ಪರಿಣಾಮ ಎಂಟು ಭದ್ರತಾ ಸಿಬ್ಬಂದಿಗಳು ಮತ್ತು ಓರ್ವ ನಾಗರಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಬೇದ್ರೆ-ಕುಟ್ರು ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.