ಬಾಂದ್ರಾ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿ ಪ್ರಯಾಣಿಕರಿಗೆ ಗಾಯ

Update: 2024-10-27 05:28 GMT
Photo credit: NDTV

ಮಹಾರಾಷ್ಟ್ರ: ಮುಂಬೈನ ಬಾಂದ್ರಾ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತದಿಂದ ಕನಿಷ್ಠ 9 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ ಹೊರಡುವ ಮುನ್ನ ಪ್ಲಾಟ್ಫಾರ್ಮ್ ಸಂಖ್ಯೆ 1ರಲ್ಲಿ ಈ ಘಟನೆ ಸಂಭವಿಸಿದೆ.

ಬಾಂದ್ರಾ ರೈಲ್ವೇ ಪ್ಲಾಟ್ಫಾರ್ಮ್ ನಂಬರ್ 1ರಲ್ಲಿ ಜನದಟ್ಟಣೆಯಿಂದ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News