ತಮಿಳುನಾಡು| ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಪೋಟ: 9 ಮಂದಿ ಮೃತ್ಯು

Update: 2023-10-17 11:06 GMT

Screengrab:X/@ANI

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದಲ್ಲಿರುವ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ಕಮ್ಮಪಟ್ಟಿ ಗ್ರಾಮದ ಇದೇ ಘಟಕದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಎರಡು ಸ್ಫೋಟದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಸ್ಫೋಟಕ್ಕೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News