ಕೇಜ್ರಿವಾಲ್ ನಿವಾಸದ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ, ಅವರನ್ನು ಇಂದು ಬಂಧಿಸಲಾಗುತ್ತದೆ: ಎಎಪಿ

Update: 2024-01-04 05:51 GMT

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (PTI)

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯವು ಮುಂದಾಗಿರುವುದರಿಂದ ಅವರ ನಿವಾಸಕ್ಕೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದ್ದು, ಎಲ್ಲ ದ್ವಾರಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಎಎಪಿ ಆರೋಪಿಸಿದೆ.

ಆದರೆ, ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲಾಗುತ್ತದೆ ಎಂದು ಆಪ್ ಪ್ರತಿಪಾದಿಸುತ್ತಿರುವುದರಿಂದ, ಅವರ ನಿವಾಸದ ಮುಂದೆ ಬುಧವಾರದಿಂದ ಮಾಧ್ಯಮ ಮಂದಿಯು ಜಮಾಯಿಸಿದ್ದು, ಅವರನ್ನು ನಿಭಾಯಿಸಲು ಮುಖ್ಯಮಂತ್ರಿ ನಿವಾಸದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

“ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದ್ದು, ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರಗಳೆದುರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮುಖ್ಯಮಂತ್ರಿಗಳ ನಿವಾಸದೆದುರು ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸಿಬ್ಬಂದಿಗಳಿಗೂ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ” ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

“ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲು ಸಿದ್ಧತೆ ನಡೆಸುತ್ತಿದೆ” ಎಂದು ಎಎಪಿ ಪಕ್ಷದ ಮೂಲಗಳು ಪ್ರತಿಪಾದಿಸಿವೆ.

ಇದಕ್ಕೂ ಮುನ್ನ, ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಮೂರನೆಯ ಸಮನ್ಸ್ ಅನ್ನೂ ತಪ್ಪಿಸಿಕೊಂಡು ಬುಧವಾರ ಜಾರಿ ನಿರ್ದೇಶನಾಲಯದೆದುರು ಗೈರು ಹಾಜರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News