ಕೇಜ್ರಿವಾಲ್ ಬಂಧನ ವಿರೋಧಿಸಿ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ: ಬಿಜೆಪಿ ಮುಖ್ಯ ಕಚೇರಿ ಎದುರು ಬಿಗಿ ಭದ್ರತೆ

Update: 2024-03-22 05:48 GMT

Photo: PTI 

ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ದಿಲ್ಲಿ ಪೊಲೀಸರು ಶುಕ್ರವಾರ ಬಿಜೆಪಿ ಮುಖ್ಯ ಕಚೇರಿ ಎದುರು ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿಯ ನಿಯೋಜನೆ, ರಸ್ತೆಗೆ ಹಲವು ಹಂತದ ತಡೆಗೋಡೆಗಳನ್ನು ನಿರ್ಮಿಸುವ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

ದಿಲ್ಲಿಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ.

ಆಪ್ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ನೆರೆಯಬಹುದು ಎಂಬ ನಿರೀಕ್ಷೆಯಲ್ಲಿ ವಾಹನ ಪ್ರಯಾಣಿಕರಿಗೆ ಕೇಂದ್ರ ದಿಲ್ಲಿ ಮಾರ್ಗವನ್ನು ತಪ್ಪಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಕೇಂದ್ರ ದಿಲ್ಲಿಯಲ್ಲಿರುವ ಬಿಜೆಪಿ ಮುಖ್ಯ ಕಚೇರಿ ಹಾಗೂ ಜಾರಿ ನಿರ್ದೇಶನಾಲಯಕ್ಕೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಈ ನಡುವೆ, ಆಪ್ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ದಿಲ್ಲಿ ಮೆಟ್ರೊ ರೈಲು ನಿಗಮವು ಐಟಿಒ ಮೆಟ್ರೊ ನಿಲ್ದಾಣದ ಕಾರ್ಯಾಚರಣೆಯನ್ನು ಬೆಳಗ್ಗೆ 8ರಿಂದ ಸಂಜೆ 6ರ ನಡುವೆ ಸ್ಥಗಿತಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News