ಆಕಸ್ಮಿಕ ಗುಂಡಿನ ದಾಳಿ ; ಯೋಧ ಬಲಿ, ಸೇನಾ ಸಿಬ್ಬಂದಿ ಬಂಧನ
Update: 2023-09-17 10:17 GMT
ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯ ಆಕಸ್ಮಿಕ ಗುಂಡಿನ ದಾಳಿಯಿಂದ ಒಬ್ಬ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಆರೋಪಿ ಸೇನಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
"ಈ ಆಕಸ್ಮಿಕ ದಾಳಿಯ ಪರಿಣಾಮವಾಗಿ ಒಬ್ಬ ಮೃತಪಟ್ಟು ಮತ್ತು ಮತೊಬ್ಬ ಸೇನಾ ಸಿಬ್ಬಂದಿಗೆ ಗಾಯವಾಗಿದೆ. ಆರೋಪಿ ಸೇನಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು" ಎಂದು ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಪೊಲೀಸ್ ಬಂಡಿಪೋರಾ X ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.