ವಕ್ಫ್ ತಿದ್ದುಪಡಿ ಮಸೂದೆಗೆ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ವಿರೋಧ
ಚೆನ್ನೈ: ಬಿಜೆಪಿ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ, ವಕ್ಫ್ ತಿದ್ದುಪಡಿ ಮಸೂದೆ 2024ನ್ನು "ಒಕ್ಕೂಟ ವ್ಯವಸ್ಥೆ ವಿರುದ್ಧದ ದಾಳಿ" ಎಂದು ಕರೆದಿದ್ದು, ಪ್ರಸ್ತಾವಿತ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದೆ.
ಇದಲ್ಲದೆ, ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಡಿಎಂಕೆ ಸರಕಾರವನ್ನು ತರಾಟೆಗೆ ತೆಗೆದುಕೊಂಡ ತಮಿಳಗ ವೆಟ್ರಿ ಕಳಗಂ ಪಕ್ಷವೂ ಜಾತಿ ಸಮೀಕ್ಷೆ ನಡೆಸುವಂತೆ, ಪರಂದೂರು ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಡುವಂತೆ, ರಾಜ್ಯದಲ್ಲಿನ ಮದ್ಯದಂಗಡಿಗಳನ್ನು ಮುಚ್ಚುವಂತೆ, ನೀಟ್ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿದೆ. ʼಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು ಈ ನೀತಿಯ ಜಾರಿಯನ್ನು ಪಕ್ಷವು ವಿರೋಧಿಸುತ್ತದೆ ಎಂದು ಹೇಳಿದೆ.
ತಮಿಳಗ ವೆಟ್ರಿ ಕಳಗಂ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಮೊದಲ ಸಭೆಯಲ್ಲಿ ಪಕ್ಷ ಸಂಘಟನೆ 'ಬಲಪಡಿಸುವ' ಬಗ್ಗೆ ಚರ್ಚಿಸಲಾಗಿದೆ. ಪಕ್ಷದ ಸಿದ್ಧಾಂತವು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ ಎಂದು ಹೇಳಿಕೊಂಡಿದೆ.