ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಉತ್ತರ ಪ್ರದೇಶ ಸರ್ಕಾರದ ಅವ್ಯವಸ್ಥೆಯೇ ಕಾರಣ: ರಾಹುಲ್ ಗಾಂಧಿ
![ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಉತ್ತರ ಪ್ರದೇಶ ಸರ್ಕಾರದ ಅವ್ಯವಸ್ಥೆಯೇ ಕಾರಣ: ರಾಹುಲ್ ಗಾಂಧಿ Photo of Rahul Gandhi](https://www.varthabharati.in/h-upload/2025/01/29/1500x900_1318771-rahul.webp)
ರಾಹುಲ್ ಗಾಂಧಿ
ಹೊಸದಿಲ್ಲಿ: ಮಹಾ ಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಕಳವಳ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ಸರ್ಕಾರದ ಅವ್ಯವಸ್ಥೆಯೇ ಮತ್ತು ಭಕ್ತರ ಸುರಕ್ಷತೆಗಿಂತ ವಿಐಪಿಗಳ ಸಂಚಾರದ ಮೇಲೆ ಕೇಂದ್ರೀಕರಿಸಿರುವುದು ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ.
"ಪ್ರಯಾಗರಾಜ್ ಮಹಾಕುಂಭದಲ್ಲಿ ಕಾಲ್ತುಳಿತದಿಂದ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಆಶಿಸುತ್ತೇನೆ. ಸಾಮಾನ್ಯ ಭಕ್ತರ ಬದಲು ವಿಐಪಿಗಳ ಸಂಚಾರದ ಮೇಲೆ ಸರ್ಕಾರ ವಿಶೇಷವಾಗಿ ಗಮನ ಹರಿಸಿದ್ದು ಈ ದುರಂತ ಘಟನೆಗೆ ಕಾರಣವಾಗಿದೆ" ಎಂದು ರಾಹುಲ್ ಗಾಂಧಿ ತಮ್ಮ X ಪೋಸ್ಟ್ ನಲ್ಲಿ ಹೇಳಿದ್ದಾರೆ.
ಈ ರೀತಿಯ ದುರಂತ ಘಟನೆ ಮತ್ತೆ ಸಂಭವಿಸದಂತೆ ತಡೆಯಲು ವ್ಯವಸ್ಥೆಗಳನ್ನು ಹೆಚ್ಚಿಸುವಂತೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
प्रयागराज महाकुंभ में भगदड़ के कारण कई लोगों के मौत और कईयों के घायल होने की ख़बर अत्यंत दुखद है।
— Rahul Gandhi (@RahulGandhi) January 29, 2025
शोकाकुल परिवारों के प्रति अपनी गहरी संवेदनाएं व्यक्त करता हूं और घायलों के शीघ्र स्वस्थ होने की आशा करता हूं।
इस दुखद घटना के लिए कुप्रबंधन, बदइंतजामी और आम श्रद्धालुओं की जगह VIP…