23 ವರ್ಷಗಳ ಬಳಿಕ ಮತ್ತೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಕಪಿಲ್ ಸಿಬಲ್
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಗೆಲುವು ಸಾಧಿಸಿದ್ದಾರೆ.
ಸಿಬಲ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರಾಯ್ ಅವರನ್ನು ಸೋಲಿಸುವ ಮೂಲಕ ವಿಜಯಿಯಾದರು. ಪ್ರದೀಪ್ ರಾಯ್ 689 ಮತ ಗಳಿಸಿದರೆ, ಕಪಿಲ್ ಸಿಬಲ್ ಅವರು 1066 ಮತ ಗಳಿಸಿದರು. ಹಾಲಿ ಅಧ್ಯಕ್ಷ, ಹಿರಿಯ ವಕೀಲ ಡಾ. ಆದೀಶ್ ಸಿ ಅಗರವಾಲಾ ಅವರು 296 ಮತಗಳನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಿಯಾ ಹಿಂಗೋರಾಣಿ, ತ್ರಿಪುರಾರಿ ರೇ ಮತ್ತು ನೀರಜ್ ಶ್ರೀವಾಸ್ತವ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.
ನಾಲ್ಕನೇ ಬಾರಿಗೆ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಮೂರು ಬಾರಿ, 1995-96 ಮತ್ತು 1997-98 ಮತ್ತು 2001ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2001ರ ಬಳಿಕ 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಗೆ ಅಧ್ಯಕ್ಷ ಸ್ಥಾನ ಒಲಿದಿದೆ.