ನ. 25ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ ಸರಕಾರ
Update: 2024-11-19 14:03 IST

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದ್ದು, ಇದಕ್ಕೂ ಮುನ್ನ ನ.24ರಂದು(ರವಿವಾರ) ಕೇಂದ್ರ ಸರಕಾರ ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಗಮನದಲ್ಲಿಟ್ಟುಕೊಂಡು ನವೆಂಬರ್ 24ರಂದು ಬೆಳಿಗ್ಗೆ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.
ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ಹಿನ್ನೆಲೆ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಾಸಕಾಂಗದ ಕಾರ್ಯಸೂಚಿ ಬಗ್ಗೆ ಪ್ರತಿಪಕ್ಷಗಳಿಗೆ ತಿಳಿಸಲು ಸರ್ಕಾರವು ಸರ್ವ ಪಕ್ಷ ಸಭೆಯನ್ನು ಕರೆದಿದೆ.