ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
Update: 2025-04-07 20:27 IST

Photo | PTI
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾಯಿದೆ-2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠ, ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ, ಕಾಂಗ್ರೆಸ್ ಸಂಸದ ಮುಹಮ್ಮದ್ ಜಾವೇದ್, ಎಎಪಿ ಶಾಸಕ ಅಮಾನತುಲ್ಲಾ ಖಾನ್ ಸೇರಿದಂತೆ ಇತರರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿ ತುರ್ತು ವಿಚಾರಣೆಗೆ ಪಟ್ಟಿ ಮಾಡಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಪ್ರಿಲ್ 5ರಂದು ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ಅಂಕಿತ ಹಾಕಿದರು. ಎಪ್ರಿಲ್ 6ರಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.