ಕೇರಳ | 182 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
Update: 2025-01-03 15:03 GMT
ತಿರುವನಂತಪುರಂ: ದುಬೈನಿಂದ ಬಂದ 182 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದ ಹಿನ್ನೆಲೆ ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ʼಏರ್ ಇಂಡಿಯಾ ಎಕ್ಸ್ ಪ್ರೆಸ್- IX344ʼ ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 182 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣವಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಆತಂಕಗಳ ಹೊರತಾಗಿಯೂ, ವಿಮಾನವು ಯಾವುದೇ ಸಮಸ್ಯೆಗಳಿಲ್ಲದೆ ಲ್ಯಾಂಡಿಂಗ್ ಆಗಿದೆ. ಇದೀಗ ತುರ್ತು ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗಿದ್ದು, ವಿಮಾನ ನಿಲ್ಧಾಣದಲ್ಲಿ ಸಾಮಾನ್ಯ ಕಾರ್ಯಚರಣೆಗಳು ಪುನರಾರಂಭಗೊಂಡಿದೆ ಎಂದು ವಿಮಾನ ನಿಲ್ಧಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.