ವಿಮಾನ ಲ್ಯಾಂಡ್ ಮಾಡಿದ ಬಳಿಕ ಏರ್ ಇಂಡಿಯಾ ಪೈಲಟ್ ಮೃತ್ಯು
Update: 2025-04-10 20:30 IST

ಸಾಂದರ್ಭಿಕ ಚಿತ್ರ | PC : PTI
ಹೊಸದಿಲ್ಲಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ ವಿಮಾನ ಬುಧವಾರ ದಿಲ್ಲಿಯಲ್ಲಿ ಬಂದಿಳಿದ ಸ್ಪಲ್ಪ ಸಮಯದ ಬಳಿಕ ಅದರ ಪೈಲಟ್ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ ಅಧಿಕಾರಿಗಳು ತಿಳಿಸಿದ್ದಾರೆ.
30 ವರ್ಷದ ಪೈಲಟ್ ಶ್ರೀನಗರದಿಂದ ದಿಲ್ಲಿಗೆ ಸಂಚಾರ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಚಲಾಯಿಸುತ್ತಿದ್ದರು. ವಿಮಾನ ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಅವರು ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.
‘‘ನಮ್ಮ ಸಹೋದ್ಯೋಗಿ ಅನಾರೋಗ್ಯದಿಂದ ಸಾವನ್ನಪ್ಪಿರುವುದಕ್ಕೆ ಸಂತಾಪ ವ್ಯಕ್ತಪಡಿಸುತ್ತೇವೆ. ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡುತ್ತೇವೆ’’ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ ವಕ್ತಾರ ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.