ಏರ್‌ಸೆಲ್-ಮ್ಯಾಕ್ಸಿಸ್ ಹಣ ಅಕ್ರಮ ವರ್ಗಾವಣೆ ಪ್ರಕರಣ

Update: 2024-11-20 15:28 GMT

ಪಿ. ಚಿದಂಬರಂ | PC : PTI 

ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ದಾಖಲಿಸಿದ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ವಿರುದ್ಧ ವಿಚಾರಣಾ ನ್ಯಾಯಾಲಯ ಕಲಾಪಕ್ಕೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ತಡೆ ನೀಡಿದೆ.

ಉಚ್ಚ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ನೋಟಿಸು ಜಾರಿ ಮಾಡಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಈ.ಡಿ. ಸಲ್ಲಿಸಿರುವ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಚಿದಂಬರಂ ಅವರು ಸಲ್ಲಿಸಿದ ಅರ್ಜಿಯ ಕುರಿತು ಅದು ಪ್ರತಿಕ್ರಿಯೆ ಕೋರಿದೆ.

‘‘ನೋಟಿಸು ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆ ವರೆಗೆ ದೂರುದಾರರ ವಿರುದ್ಧ ಕಲಾಪಗಳಿಗೆ ತಡೆ ನೀಡಲಾಗಿದೆ. ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಲಾಗಿದೆ’’ ಎಂದು ನ್ಯಾಯಮೂರ್ತಿ ಮನೋಜ್ ಕುಮಾರ್ ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News